HomeLatest Newsಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಅನರ್ಹರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ವಸತಿ ಸೇರಿದಂತೆ ವಿವಿಧ ಇಲಾಖೆಗಳ ಬಗ್ಗೆ ಸತತ 9 ಗಂಟೆಗಳ ಕಾಲ ಸುಧೀರ್ಘ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಿ,ಎಂ ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಏಕೆ ರದ್ದುಪಡಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಸುಮಾರು ಶೇಕಡ 74ರಷ್ಟು ಬಿಪಿಎಲ್ ಕಾರ್ಡ್ ಗಳಿದ್ದು, ಅನರ್ಹರನ್ನು ಗುರುತಿಸಿ ತೆಗೆದು ಹಾಕುವ ಮೂಲಕ ಅರ್ಹರಿಗೆ ಸೌಲಭ್ಯ ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಸೂಚಿಸಲಾಗಿತ್ತು. ಇದರಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿಯಾಗಿಲ್ಲ ಏಕೆ ಎಂದು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ ತಕ್ಷಣ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು. ತೆರವು ಕಾರ್ಯ ಸೇರಿ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋಮುಗಲಭೆ, ದ್ವೇಷ ಹರಡುವಿಕೆ ಹೆಚ್ಚಾಗುತ್ತಿದ್ದು, ಕಾನೂನು ಹದಗೆಟ್ಟರೆ ಅಭಿವೃದ್ಧಿ ಅಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular