BREAKING : ಬೆಂಗಳೂರಲ್ಲಿ’ಭರತ್ ಭೂಷಣ್’ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ CM ಸಿದ್ದರಾಮಯ್ಯ |Pahalgam Terror attack

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಭೂಷಣ್ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಭರತ್ ಭೂಷಣ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು. ಮಗು ಇದೆ ಬಿಟ್ಟುಬಿಡಿ ಎಂದು ಕೇಳಿಕೊಂಡರೂ ನನ್ನ ಗಂಡನನ್ನು ಬಿಡಲಿಲ್ಲ ಎಂದು ಭೂಷಣ್ ಪತ್ನಿ ಸಿಎಂ ಸಿದ್ದರಾಮಯ್ಯ ಎದುರು ಅಳಲು ತೋಡಿಕೊಂಡರು.

ಜಮ್ಮು-ಕಾಶ್ಮೀರದಲ್ಲಿ ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಪ್ರಾಣ ಕಳೆದುಕೊಂಡಿದ್ದಾರೆ.ಪಹಲ್ಗಾಮ್ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್ ತಲೆಗೆ ಉಗ್ರರು ಶೂಟ್ ಮಾಡಿದ್ದು, ಅಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read