BIG NEWS : ಮಾಜಿ ಶಾಸಕ ಆರ್.ವಿ.ದೇವರಾಜ್ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ CM ಸಿದ್ದರಾಮಯ್ಯ |WATCH VIDEO

ಬೆಂಗಳೂರು : ಹೃದಯಾಘಾತದಿಂದ ಮೃತಪಟ್ಟ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು.

ಎಂಎಲ್ಎ ಹಾಗೂ ಎಂಎಲ್ಸಿ ಆಗಿ ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರು ನಿಧನರಾಗಿದ್ದಾರೆ. ನಾಳೆಯೇ ಅವರ ಜನ್ಮದಿನವಾಗಿದ್ದರಿಂದ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿಗೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ. ದೇವರಾಜ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ.

ಇತ್ತೀಚೆಗೆ ನನ್ನನ್ನು ಭೇಟಿಯಾಗಿದ್ದ ದೇವರಾಜ್ ಅವರು ಕೆಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read