ಬೆಂಗಳೂರು : ಅನಾರೋಗ್ಯದಿಂದ ಇಂದು ನಿಧನರಾದ ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಇಂದು ಅಂತಿಮ ದರ್ಶನ ಪಡೆದರು.
ಮಾಜಿ ಸಚಿವರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಮತ್ತಿತರರಿದ್ದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಾಳೆ ಮೇಟಿ ಅವರ ಅಂತ್ಯಕ್ರಿಯೆ ನೆರವೇರಲಿದೆ. ಲಿಂಗಾಯ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ಶಾಸಕ ಹೆಚ್ ವೈ ಮೇಟಿ ನಿಧನದಿಂದ ಅಭಿಮಾನಿಗಳಲ್ಲಿ ದುಃಖ ಮಡುಗಟ್ಟಿದ್ದು, ಕಣ್ಣೀರಿಡುತ್ತಿದ್ದಾರೆ.
ಇಂದು ನಮ್ಮನ್ನೆಲ್ಲ ಅಗಲಿದ ಹಿರಿಯ ನಾಯಕರು, ಮಾಜಿ ಸಚಿವರು, ಹಾಲಿ ಶಾಸಕರು, ಆತ್ಮೀಯರೂ ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದೆ.
— Siddaramaiah (@siddaramaiah) November 4, 2025
ಇದೊಂದು ಅತ್ಯಂತ ನೋವಿನ ಘಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.  pic.twitter.com/AXilgpZnIJ
