ಬೆಂಗಳೂರು: ವೃದ್ಧಾಪ್ಯ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈಗಿರುವ 1200 ರೂ. ಮಾಸಾಶನವನ್ನು ಬಜೆಟ್ ನಲ್ಲಿ ಏರಿಕೆ ಮಾಡಲಾಗುವುದು. ಎಷ್ಟು ಎಂದು ಈಗಲೇ ಹೇಳುವುದಿಲ್ಲ ಎಂದು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ.
ಹಿರಿಯ ನಾಗರಿಕರಿಗೆ 1200 ರೂ. ಮಾಸಾಶನ ನೀಡುತ್ತಿದ್ದು, 2000 ರೂ.ಗೆ ಏರಿಕೆ ಮಾಡಬೇಕೆಂಬ ಬೇಡಿಕೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಮಾಸಾಶನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಎಷ್ಟು ಹೆಚ್ಚಳ ಮಾಡುತ್ತೇವೆ ಎಂದು ಈಗಲೇ ಹೇಳುವುದಿಲ್ಲ. ಬಜೆಟ್ ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿ, ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.… pic.twitter.com/2Wx3UGCEmN
— CM of Karnataka (@CMofKarnataka) October 1, 2023