BIG NEWS: 17.5 ಕೋಟಿ ರೂ. ಇಂಜೆಕ್ಷನ್ ಗೆ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕಂದನ ಪ್ರಾಣ ಉಳಿಸಿ: ಮೋದಿಗೆ ಪತ್ರ ಬರೆದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದ 15 ತಿಂಗಳ ಮಗು ಮೌರ್ಯ ಚಿಕಿತ್ಸೆಗೆ ನೆರವಾಗುವಂತೆ ಕೋರಿದ್ದಾರೆ.

ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ 17.5 ಕೋಟಿ ರೂ. ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

https://twitter.com/CMofKarnataka/status/1719679659003216258

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read