BREAKING : ‘ಸದ್ಭಾವನಾ ದಿನ’ದ ಪ್ರಯುಕ್ತ ವಿಧಾನಸೌಧದಲ್ಲಿ ‘ಪ್ರತಿಜ್ಞಾ ವಿಧಿ’ ಬೋಧಿಸಿದ CM ಸಿದ್ದರಾಮಯ್ಯ |WATCH VIDEO

ಬೆಂಗಳೂರು : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸದ್ಭಾವನಾ ದಿನದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಇಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಆಧುನಿಕ ಭಾರತದ ನಿರ್ಮಾತೃ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ಆಚರಿಸಲ್ಪಡುವ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದೆ. ವೈಜ್ಞಾನಿಕ ಹಾಗೂ ವೈಚಾರಿಕತೆಯ ನೆಲೆಯಲ್ಲಿ ದೇಶ ಕಟ್ಟುವ ಕನಸು ಕಂಡಿದ್ದ ರಾಜೀವ್ ಗಾಂಧಿಯವರು, ಭಾರತವನ್ನು ಸರ್ವಧರ್ಮ ಸಹಬಾಳ್ವೆಯ ರಾಷ್ಟ್ರವಾಗಬೇಕು ಎಂದು ಕೂಡ ಬಯಸಿದ್ದರು. ರಾಜೀವ್ ಗಾಂಧಿಯವರು ದೇಶದ ಅಭಿವೃದ್ಧಿಯ ಹೊಸ ಹಾದಿಯನ್ನು ತೋರಿದ್ದಾರೆ, ಇಂದು ನಾವೆಲ್ಲರೂ ಆ ಹಾದಿಯಲ್ಲಿ ಮುನ್ನಡೆಯುವ ಸಂಕಲ್ಪಗೈದು, ಮಹಾನ್ ಚೇತನದ ಜಯಂತಿಯನ್ನು ಅರ್ಥಪೂರ್ಣವಾಗಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸದ್ಭಾವನಾ ದಿನವು ಭಾರತದಲ್ಲಿ ಪ್ರತಿ ವರ್ಷ ಆಗಸ್ಟ್ 20 ರಂದು ಆಚರಿಸಲಾಗುವ ಒಂದು ದಿನವಾಗಿದೆ. ಇದು ಎಲ್ಲಾ ಧರ್ಮ, ಜಾತಿ ಮತ್ತು ಭಾಷೆಯ ಜನರ ನಡುವೆ ಸೌಹಾರ್ದತೆ ಮತ್ತು ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ಈ ದಿನದಂದು, ಜನರು ಹಿಂಸೆಯನ್ನು ತ್ಯಜಿಸುವುದಾಗಿ ಮತ್ತು ಎಲ್ಲರೊಂದಿಗೆ ಸೌಹಾರ್ದತೆಯಿಂದ ಬದುಕುವುದಾಗಿ ಪ್ರತಿಜ್ಞೆ ಸ್ವೀಕರಿಸುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read