‘ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಗೆ ಅಭಿನಂದನೆಗಳು’ : CM ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ’ ಎಂದಿದ್ದಾರೆ.

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ
ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದಿದ್ದಾರೆ.

https://twitter.com/siddaramaiah/status/1743496907333177468

https://twitter.com/siddaramaiah/status/1743496717054464127

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read