ಬೆಳಗಾವಿಯಲ್ಲಿ ‘ಮಹಿಳೆ’ ಮೇಲಿನ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯಲ್ಲಿ ‘ಮಹಿಳೆ’ ಮೇಲಿನ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ. ಹಾಗಾಗಿ ಬೇರೆ ಪ್ರಶ್ನೆ ಉದ್ಭವಿಸದು ಎಂದರು.

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ. ಕ್ಯಾಶ್ ಕಾರ್ಡ್ ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು.

ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿವೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read