ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಕಾಂಕ್ಷಿಗಳಿಗೆ ಸಿಎಂ ಸಿಹಿ ಸುದ್ದಿ

ಬೆಳಗಾವಿ(ಸುವರ್ಣಸೌಧ): ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿ ಒಳಗೆ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಗುರಿ ನಿಗದಿಪಡಿಸಿದ್ದು, ಶೀಘ್ರಗತಿಯಲ್ಲಿ ನೇಮಕಾತಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿಯ ಶಶಿಲ್ ನಮೋಶಿ ಪ್ರಸ್ತಾಪಿಸಿದ ವಿಷಯಕ್ಕೆ ಲಿಖಿತ ಉತ್ತರ ನೀಡಿರುವ ಸಿಎಂ, ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕದಲ್ಲಿ ಆಗುತ್ತಿರುವ ವಿಳಂಬ ತಡೆಗೆ ಕ್ರಮ ಕೈಗೊಂಡಿದ್ದು, ನೇಮಕಾತಿ ಪ್ರಕ್ರಿಯೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಆಯೋಗದ ಅಧಿಕಾರಿಗಳು ನೌಕರರು ಸಾರ್ವತ್ರಿಕ ರಜಾ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ತಾತ್ಕಾಲಿಕ ವೇಳಾಪಟ್ಟಿ ಹಾಕಿಕೊಂಡು ನೇಮಕಾತಿ ಪ್ರಕ್ರಿಯೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ. ಪ್ರತಿ ನೇಮಕಾತಿ ಪ್ರಕ್ರಿಯೆಯಲ್ಲೂ ಅಭ್ಯರ್ಥಿಗಳು ಕಾನೂನು ಪ್ರಕರಣ ದಾಖಲಿಸುತ್ತಿದ್ದು, ಇದರಿಂದ ವಿಳಂಬವಾಗುತ್ತಿದೆ. ನಿಗದಿತ ಸಮಯದಲ್ಲಿ ಅಭ್ಯರ್ಥಿಗಳು ಮೂಲ ದಾಖಲೆ ಸಲ್ಲಿಸದಿರುವುದೂ ವಿಳಂಬಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿಯೊಳಗೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read