CM Siddaramaiah : ‘ರಿಲ್ಯಾಕ್ಸ್ ಮೂಡ್’ ನಲ್ಲಿ ಸಿಎಂ ಸಿದ್ದರಾಮಯ್ಯ : ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು

ಬೆಂಗಳೂರು : ನಿನ್ನೆ ಬಜೆಟ್ ಮಂಡನೆ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ರಿಲ್ಯಾಕ್ಸ್ ಮೂಡ್ ನಲ್ಲಿದ್ದು,
ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇಂದು ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ದಾಖಲೆಯ 14ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ 50 ನಿಮಿಷಗಳ ಕಾಲ ನಿರಂತರವಾಗಿ ಬಜೆಟ್ ಓದಿದ್ದಾರೆ. ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ಸಚಿವರು, ಶಾಸಕರು ಅಭಿನಂದನೆ ಸಲ್ಲಿಸಿದರು. ಮುಖ್ಯಮಂತ್ರಿಯಾಗಿ 7 ಬಾರಿ ಬಜೆಟ್ ಮಂಡಿಸಿದ ಕಾರಣಕ್ಕೆ ಹಾಗೂ ಒಟ್ಟು 14 ಬಾರಿ ಆಯವ್ಯಯ ಮಂಡಿಸುವ ಮೂಲಕ ರಾಜ್ಯದಲ್ಲಿ ಹೊಸ ದಾಖಲೆ ಬರೆದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಯಿತು.ಈ ಬಾರಿಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ ಆಗಿದೆ. ಬಜೆಟ್ ನಲ್ಲಿ 22,441 ಕೋಟಿ ರೂ ಸಾಲ ಮರು ಪಾವತಿಗೆ ವ್ಯಯವಾಗಲಿದೆ. ಬಂಡವಾಳ ಹೂಡಿಕೆಗೆ 54,374 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read