BIG NEWS : ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ದ ಲಾಂಛನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು.

ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ವಿದ್ಯಾಶಂಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 15 ನೇ ಆವೃತ್ತಿಯನ್ನು ಫೆಬ್ರವರಿ 29 ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ.  ಇದನ್ನು  ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read