ಮೈಸೂರು : ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿಂದ ಸಿಎಂ ಸಿದ್ದರಾಮಯ್ಯ ಕಾಲೇಜು ದಿನಗಳನ್ನು ನೆನಪಿಸಿಕೊಂಡರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಜಾತಿ ವ್ಯವಸ್ಥೆ ನೀರಿನ ಬಾವಿಗೆ ಬಿದ್ದ ಕಸದಂತೆ
ಜಾತಿ ವ್ಯವಸ್ಥೆ ನೀರಿನ ಬಾವಿಗೆ ಬಿದ್ದ ಕಸದಂತೆ. ಕೊಡದಲ್ಲಿ ನೀರು ಸೇದುವಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಮೇಲೆ ಮತ್ತೆ ಕಸ ತುಂಬಿಕೊಳ್ಳುತ್ತದೆ. ಆದ್ದರಿಂದ ಕಸವನ್ನೇ ನೀರಿನಿಂದ ತೆಗೆದು ಹೊರಗೆ ಹಾಕಿದರೆ ಜಾತಿ ವ್ಯವಸ್ಥೆ ಮತ್ತು ಅಸಮಾನತೆ ಹೋಗುತ್ತದೆ. ಈ ಅಸಮಾನತೆ ಅಳಿಸುವ ಉದ್ದೇಶದಿಂದಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆರ್ಥಿಕವಾಗಿ ಶಕ್ತಿ ಬಂದರೆ ಸ್ವಾಭಿಮಾನಿಗಳಾಗುತ್ತಾರೆ. ಮಹಿಳೆಯರಲ್ಲಿ, ಬಡವರಲ್ಲಿ ಆರ್ಥಿಕ ಶಕ್ತಿ ತುಂಬುವ ಮೂಲಕ ಅವರನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾವುಗಳು ಬುದ್ಧ-ಬಸವ-ಕುವೆಂಪು ಆಗಲು ಸಾಧ್ಯವಿಲ್ಲ. ಆದರೆ ಇವರ ಹಾದಿಯಲ್ಲಾದರೂ ನಡೆಯಬೇಕು. ಬಸವಣ್ಣರನ್ನು ಪೂಜಿಸುತ್ತಾ ಯಾವ ಜಾತಿ ಎಂದು ಜಾತಿವಾದ ಮಾಡುವುದು ತಪ್ಪು. ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ. ದೇವರು ಯಾರ ಹಣೆಯಲ್ಲೂ ತಾರತಮ್ಯ, ಬಡತನವನ್ನು ಬರೆಯುವುದಿಲ್ಲ. ಹೀಗೆ ಬರೆದವರನ್ನು ದೇವರು ಎಂದು ಜನ ಒಪ್ಪುವುದಿಲ್ಲ. ಅಂಬೇಡ್ಕರ್, ಬುದ್ಧ ಎಲ್ಲರೂ ಹಣೆಬರಹ ಎನ್ನುವ ಮೌಡ್ಯವನ್ನು ಅಳಿಸಿ ವೈಚಾರಿಕತೆ ಬೆಳೆಸಲು ಯತ್ನಿಸಿದರು. ಆದ್ದರಿಂದ ಅಂಬೇಡ್ಕರ್ ಅವರು ಮೌಡ್ಯವಿಲ್ಲದ ಬೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
https://twitter.com/siddaramaiah/status/1793896270970691757