ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ತೋರಿದರೆ ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆ: ಬಿಜೆಪಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದೆ ಭಂಡತನ ತೋರಿದರೆ ಆಗಸ್ಟ್ 19 ರಿಂದ ರಾಜ್ಯದಾತ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ ಅವರು, ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಆಗಸ್ಟ್ 19 ರಿಂದ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್, ಭಷ್ಟಾಚಾರ ಮುಚ್ಚಿಕೊಳ್ಳಲು ಲೋಕಾಯುಕ್ತವನ್ನು ಮುಚ್ಚಿದ್ದ ಸಿದ್ದರಾಮಯ್ಯ ಕುರ್ಚಿ ಬಿಟ್ಟು ತನಿಖೆಗೆ ಸಹಕಾರ ನೀಡಬೇಕು. ಆರೋಪ ಸಾಬೀತಾಗದಿದ್ದರೆ ಅವರು ಮತ್ತೆ ಮುಖ್ಯಮಂತ್ರಿಯಾಗಲಿ. ಕಾಂಗ್ರೆಸ್ಸಿಗರಿಗೆ ಬೇಕಿದ್ದಾಗ ರಾಜ್ಯಪಾಲರು ಒಳ್ಳೆಯವರಾಗುತ್ತಾರೆಯೇ ಎಂದು ಹೇಳಿದ್ದಾರೆ.

ರಾಜ್ಯಪಾಲರ ನಡೆ ಪ್ರಶ್ನಿಸುವವರು ಮುಂದೆ ನ್ಯಾಯಾಲಯವನ್ನೂ ಪ್ರಶ್ನಿಸಬಹುದು. ರಾಜಪಾಲರಿಗೆ ದೂರು ನೀಡಿದ್ದು ಬಿಜೆಪಿಯಲ್ಲ. ರಾಜ್ಯಪಾಲರಿಗೆ ವಿವರಣೆ ನೀಡದೆ ಸಿದ್ದರಾಮಯ್ಯ ಜನರಿಗೆ ಅಪಮಾನ ಮಾಡಿದ್ದಾರೆ ಎಂದು ಟೀಕೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read