HomeKarnatakaಪ್ರಧಾನಿ ಮೋದಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ...

ಪ್ರಧಾನಿ ಮೋದಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಜಿಟಿಡಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆ ಕೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿಗಳ ತವರು ಮೈಸೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆಯಾಗಿದೆ. ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿವೆ. ಸಿದ್ದರಾಮಯ್ಯನವರ ತವರು, ಉಪಮುಖ್ಯಮಂತ್ರಿಗಳ ತವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಯನ್ನು ಜನ ಒಪ್ಪಿಕೊಂಡಿದ್ದಾರೆ. ಮೋದಿ ರಾಜೀನಾಮೆ ಕೇಳುವ ಸಿದ್ದರಾಮಯ್ಯ ಅವರೇ ಸ್ವಕ್ಷೇತ್ರದಲ್ಲಿ ಅಭ್ಯರ್ಥಿಗಳ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡಲಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular