HomeKarnatakaವಿಧಾನಸಭೆ ಅಧಿವೇಶನಕ್ಕೆ ಮುನ್ನ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಆರ್. ಅಶೋಕ್

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಆರ್. ಅಶೋಕ್

ದಾವಣಗೆರೆ: ಮುಂದಿನ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಹಳ ದಿನ ಉಳಿಯುವುದೇ ಇಲ್ಲ ಎನ್ನುವ ಗ್ಯಾರಂಟಿ ಸ್ವತಃ ಸಿದ್ದರಾಮಯ್ಯನವರಿಗೆ ಇದೆ. ಹೀಗಾಗಿ ಮುಂದಿನ ಅಧಿವೇಶನದ ಒಳಗೆ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 16 ತಿಂಗಳಲ್ಲಿ ಮುಡಾ, ವಾಲ್ಮೀಕಿ, ಕಾರ್ಮಿಕ ಇಲಾಖೆ, ಲಿಕ್ಕರ್ ಸೇರಿದಂತೆ 16 ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಧಿವೇಶನದಲ್ಲಿ ಸರ್ಕಾರದ ಎಲ್ಲಾ ಭ್ರಷ್ಟಾಚಾರ, ಹಗರಣಗಳನ್ನು ಪ್ರಸ್ತಾಪಿಸಿ ಬಯಲಿಗೆಳೆಯಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular