HomeLatest NewsBREAKING : ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ 'CM ಸಿದ್ದರಾಮಯ್ಯ' ದೌಡು : ಸತತ 3 ಗಂಟೆ...

BREAKING : ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ‘CM ಸಿದ್ದರಾಮಯ್ಯ’ ದೌಡು : ಸತತ 3 ಗಂಟೆ ಆರೋಗ್ಯ ತಪಾಸಣೆ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಸಿಎಂ ಸಿದ್ದರಾಮಯ್ಯಗೆ 3 ಗಂಟೆ ಆರೋಗ್ಯ ತಪಾಸಣೆ ಮಾಡಲಾಗಿದೆ.

ಬೆಂಗಳೂರಿನ ಹೆಚ್ ಎಎಲ್ ಬಳಿಯಿರುವ ಮಣಿಪಾಲ್ ಆಸ್ಪತ್ರೆಗೆ ಸಿಎಂ ತೆರಳಿದ್ದರು. 3 ಗಂಟೆ ವೈದ್ಯರು ತಪಾಸಣೆ ನಡೆಸಿದ ಬಳಿಕ ಆಸ್ಪತ್ರೆಯಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದ್ದಿಗೋಷ್ಟಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದರು. ರೊಟೀನ್ ಚೆಕಪ್ ಗಾಗಿ ಆಸ್ಪತ್ರೆಗೆ ಹೋದ ಸಿಎಂ ಸುಮಾರು 3 ಗಂಟೆ ಆರೋಗ್ಯ ತಪಾಸಣೆಗೊಳಗಾದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ

ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಪಕ್ಷದ ವರಿಷ್ಠರ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಕಾರ್ಪೋರೇಷನ್, ತಾಲ್ಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028ರಲ್ಲಿ ಕಾಂಗ್ರೆಸ್ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಈ ವರೆಗೆ ಎದುರಿಸಿದ್ದೇವೆ, ಮುಂದೆಯೂ ಎದುರಿಸುತ್ತೇವೆ. ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular