ಬೆಂಗಳೂರು : ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸುಳ್ಳಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇದುವರೆಗೂ ಕೇಂದ್ರ ಸರ್ಕಾರದಿಂದ ಒಂದೇ ಒಂದು ರೂ ಸಹ ಬಿಡುಗಡೆಯಾಗಿಲ್ಲ, ರಾಜ್ಯದ ಬಿಜೆಪಿ ನಾಯಕರು ಅನುದಾನ ಬಿಡುಗಡೆ ಮಾಡಿಸಿಲ್ಲ ಎಂದರು.
ನಾವು ನಮಗೆ ಆಗಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡಿದ್ದೇವೆ, ಅನ್ಯಾಯ ಆದರೆ ಪ್ರತಿಭಟನೆ ನಡೆಸಬಾರದಾ..? ಯಡಿಯೂರಪ್ಪ ಅವರಂತೆ ಬಾಯಿ ಮುಚ್ಚಿಕೊಂಡು ಇರಬೇಕಾ?.. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸುಳ್ಳಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದಿಂದ 100 ರೂಪಾಯಿ ತೆರಿಗೆ ನೀಡಿದ್ರೆ ನಮಗೆ ಬರೋದು 12 ರೂಪಾಯಿ ಮಾತ್ರ. ತೆರಿಗೆ ಕೊಡೋದ್ರಲ್ಲಿ ದೇಶದಲ್ಲೇ ನಾವು 2ನೇ ಸ್ಥಾನದಲ್ಲಿದ್ದೇವೆ. ಆದರೂ ನಮಗೆ ಕೊಡಬೇಕಾದ ಅನುದಾನ ಸಿಗುತ್ತಿಲ್ಲ ಎಂದರು.