HomeKarnatakaಹಳೆ ಪಿಂಚಣಿ, ಆರೋಗ್ಯ ಸಂಜೀವಿನಿ, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಹಳೆ ಪಿಂಚಣಿ, ಆರೋಗ್ಯ ಸಂಜೀವಿನಿ, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: 7ನೇ ವೇತನ ಆಯೋಗ ವರದಿ ಬಳಿಕ ಸರ್ಕಾರಿ ನೌಕರರ ವೇತನ ಏರಿಕೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಹಳೇ ಪಿಂಚಣಿ ಜಾರಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಕುರಿತಾಗಿಯೂ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅಂತಿಮ ವರದಿ ನೀಡಲು ಕಾಲಾವಕಾಶ ಕೋರಿದ್ದು, ಮಾರ್ಚ್ 15 ರವರೆಗೆ ಸಮಯ ನೀಡಲಾಗಿದೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವರದಿಯನ್ನು ಶೀಘ್ರ ಸಲ್ಲಿಸುವುದಾಗಿ ಹೇಳಿದ್ದು, ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ. ಶೀಘ್ರವೇ ಬೇಡಿಕೆ ಈಡೇರಿಸುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular