HomeKarnatakaಕೇಜ್ರಿವಾಲ್ ಬಳಿಕ ಸಿದ್ಧರಾಮಯ್ಯ ಬಿಜೆಪಿ ಟಾರ್ಗೆಟ್: ಸತೀಶ್ ಜಾರಕಿಹೊಳಿ

ಕೇಜ್ರಿವಾಲ್ ಬಳಿಕ ಸಿದ್ಧರಾಮಯ್ಯ ಬಿಜೆಪಿ ಟಾರ್ಗೆಟ್: ಸತೀಶ್ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹತ್ತರಗಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ನಿಶ್ಚಿತವಾಗಿ ಪ್ರಾಸಿಕ್ಯೂಷನ್ ಗೆ ಕೊಡುತ್ತಾರೆ ಎಂದುಕೊಂಡಿದ್ದೆವು. ಅದೇ ರೀತಿ ಕೊಟ್ಟಿದ್ದಾರೆ. ಕಾನೂನು ಹೋರಾಟಕ್ಕೆ ನಾವು ಕೂಡ ಸಿದ್ದರಾಗಿದ್ದೇವೆ. ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರ ಬಗ್ಗೆ ಈಗಾಗಲೇ ಸಾಕಷ್ಟು ಆರೋಪಗಳು ಇವೆ. ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರ ರಾಜಭವನದಲ್ಲಿದೆ. ಬಿ.ಎಸ್.ವೈ. ಪ್ರಕರಣಕ್ಕೂ ಈ ಪ್ರಕರಣಕ್ಕೂ ವ್ಯತ್ಯಾಸವಿದೆ. ಸಿದ್ದರಾಮಯ್ಯ ಅವರನ್ನು ಬಿಜೆಪಿ ಹೈಕಮಾಂಡ್ ಟಾರ್ಗೆಟ್ ಮಾಡಿದೆ. ಬಿಜೆಪಿಯವರನ್ನು ಗಟ್ಟಿಯಾಗಿ ಎದುರಿಸುತ್ತಿದ್ದವರಿಗೆ ಈ ಪರಿಸ್ಥಿತಿ ತಂದಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಸಿದ್ದರಾಮಯ್ಯ ಜೊತೆಗಿರುತ್ತೇವೆ. ಕೇಜ್ರಿವಾಲ್ ಆಯ್ತು, ಅದರ ಮುಂದುವರೆದ ಭಾಗ ಇದಾಗಿದೆ. ಬೇರೆಯವರು ಸಿಎಂ ಆಗುವ ಪ್ರಶ್ನೆಯೇ ಬರುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular