BREAKING : ಮಂಡ್ಯದ ‘KRS’ ಜಲಾಶಯಕ್ಕೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ.!

ಮಂಡ್ಯ : ರೈತರ ಜೀವನಾಡಿ ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಿದರು.

ಮಂಡ್ಯದ ಕೆ.ಆರ್.ಎಸ್. ಜಲಾಶಯಕ್ಕೆ ಬಾಗಿನ ಅರ್ಪಿಸಿ ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ ಬರೆದಿದ್ದಾರೆ.
ದೇವರಾಜ ಅರಸು ಕಾಲದಲ್ಲಿ 1979 ರಿಂದ ಬಾಗಿನ ಅರ್ಪಿಸುವ ಕಾರ್ಯಕ್ರಮ ಆರಂಭವಾಗಿತ್ತು. ಅಂದಿನಿಂದ ಇಂದಿನವರೆಗೂ ಜೂನ್ ತಿಂಗಳಲ್ಲಿ ಯಾರು ಬಾಗಿನ ಸಲ್ಲಿಸಿಲ್ಲ. ಹೀಗಾಗಿ ಜೂನ್ ತಿಂಗಳಿನಲ್ಲೇ ಕೆಆರ್ಎಸ್ಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದಾರೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಜಿನ್ ಮುಹೂರ್ತದಲ್ಲಿ ಬಾಗಿನ ಅರ್ಪಿಸಿದ್ದಾರೆ. ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದೆ.ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಸಾಥ್ ನೀಡಿದರು.

TAGGED:
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read