BIG NEWS : ‘ಶಿರಾಡಿ ಘಾಟ್’ ಗುಡ್ಡ ಕುಸಿತದ ಭೀಕರತೆಗೆ ಸಿಎಂ ಸಿದ್ದರಾಮಯ್ಯ ಶಾಕ್, ಅಧಿಕಾರಿಗಳಿಗೆ ತರಾಟೆ..!

ಹಾಸನ : ಶಿರಾಡಿ ಘಾಟ್ ಗುಡ್ಡ ಕುಸಿತದ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸುವ ವೇಳೆ ಅವೈಜ್ಞಾನಿಕ ಕಾಮಗಾರಿ ಕಂಡುಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಒಟ್ಟು 45 ಕಿಮೀ ನಲ್ಲಿ 35 ಕಿಮೀ ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ.

ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು. ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು. ಇಲ್ಲಿನ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯುತ್ತೇವೆ. ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ನಾವು ಇಂತಹ ವರ್ತನೆಯನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

https://twitter.com/siddaramaiah/status/1819695254515159422

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read