HomeAgricultureರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ಕೊರತೆ ನೀಗಿಸಲು ಸರ್ಕಾರದಿಂದ ಕ್ರಮ

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ಕೊರತೆ ನೀಗಿಸಲು ಸರ್ಕಾರದಿಂದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಿ, ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular