HomeKarnatakaಟ್ವಿಟರ್ ನಲ್ಲಿ ʻನನ್ನ ತೆರಿಗೆ ನನ್ನ ಹಕ್ಕುʼ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ

ಟ್ವಿಟರ್ ನಲ್ಲಿ ʻನನ್ನ ತೆರಿಗೆ ನನ್ನ ಹಕ್ಕುʼ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ

ಬೆಂಗಳೂರು : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ನನ್ನತೆರಿಗೆನನ್ನಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್ ಎಂದರು.

ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ.

For Latest News Updates, Join Our Whatsapp Community🚩
RELATED ARTICLES

Most Popular