ಎಸ್ಎಸ್ಎಲ್ಸಿ ಫಲಿತಾಂಶ ಕಳಪೆ ಹಿನ್ನೆಲೆ: ಬಿಇಒ, ಡಿಡಿಪಿಐ ಅಮಾನತಿಗೆ ಸಿಎಂ ಆದೇಶ

ಹೊಸಪೇಟೆ: ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಜರುಗಿಸಿದ್ದಾರೆ.

ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿದ್ದು, ಅವರನ್ನು ಅಮಾನತು ಮಾಡಲಾಗಿದೆ. ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಫಲಿತಾಂಶ ಕುಸಿತಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಭೆಯ ನಡುವೆ ಶಿಕ್ಷಣ ಇಲಾಖೆ ಕಾರ್ಯದರ್ಶಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಡಿಡಿಪಿಐ ಮತ್ತು ಬಿಇಒ ಅವರನ್ನು ತಕ್ಷಣ ಅಮಾನತು ಮಾಡುವಂತೆ, ಜಿಲ್ಲಾ ಪಂಚಾಯಿತಿ ಸಿಇಒಗೆ ನೋಟಿಸ್ ನೀಡುವಂತೆ ಆದೇಶಿಸಿದ್ದಾರೆ.

ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ 10ನೇ ಸ್ಥಾನದಲ್ಲಿದ್ದ ಜಿಲ್ಲೆ ಈಗ 27ನೇ ಸ್ಥಾನಕ್ಕೆ ಕುಸಿದಿದೆ. ಈ ಸಂಬಂಧ ಕೂಡಲೇ ಡಿಡಿಪಿಐ ಅಮಾನತುಗೊಳಿಸಿದ್ದು, ಜಿಲ್ಲೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read