BIG NEWS: ರಾಜ್ಯದ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ಸರ್ಕಾರ ವಸ್ತ್ರ ಸಂಹಿತೆ ಜಾರಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜೀವಮಾನ ಸಾಧನೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿ, ಇಂಥವುದೇ ವಸ್ತ್ರ ಧರಿಸಬೇಕೆಂದು ನಾವು ಎಲ್ಲಿಯೂ ಹೇಳಿಲ್ಲ. ಭಕ್ತರು ತಮಗೆ ಇಷ್ಟವಾದ ಬಟ್ಟೆ ಧರಿಸಿ ದೇವಾಲಯಕ್ಕೆ ಹೋಗಬಹುದು ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಶುದ್ಧವಾದ ಭಕ್ತಿ ಇದ್ದರೆ ಸಾಕು ಎಂದು ಹೇಳಿದ್ದಾರೆ.

ಮನಸ್ಸಿನ ಶಾಂತಿಗಾಗಿ ಕೆಲವರು ದೇವಸ್ಥಾನಕ್ಕೆ ಹೋಗುತ್ತಾರೆ. ಭಕ್ತಿಯ ವಿರುದ್ಧ ನಾವಿಲ್ಲ. ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ದೇವಸ್ಥಾನದಲ್ಲಿ ದೇವರಿದ್ದಾನೆ ಎಂಬ ನಂಬಿಕೆಯಿಂದ ಜನ ದೇವಾಲಯಗಳಿಗೆ ಹೋಗುತ್ತಾರೆ. ಅವರ ನಂಬಿಕೆಯನ್ನು ನಾವು ಗೌರವಿಸುತ್ತೇವೆ, ಬಸವಾದಿ ಶರಣರ ಆಶಯದಂತೆ ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಕಾರ್ಯ ಪ್ರವೃತ್ತವಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read