ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ಕೋರಿದ ಎಂ.ಕೆ. ಸ್ಟಾಲಿನ್ ಗೆ ತಮಿಳಿನಲ್ಲಿ ಕೃತಜ್ಞತೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಆಗಸ್ಟ್ 3ರಂದು ಭಾನುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 78ನೇ ಹುಟ್ಟುಹಬ್ಬದ ಅಂಗವಾಗಿ  ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಸಿದ್ಧರಾಮಯ್ಯ ಅವರ ಹುಟ್ಟುಹಬ್ಬಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕನ್ನಡದಲ್ಲೇ ಶುಭಾಶಯ ಕೋರಿದ್ದರು. ಇದಕ್ಕೆ  ಸಿಎಂ ಸಿದ್ಧರಾಮಯ್ಯ ತಮಿಳಿನಲ್ಲೇ ಕೃತಜ್ಞತೆ ಸಲ್ಲಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರೇ, ನಿಮ್ಮ ಆತ್ಮೀಯ ಶುಭಾಶಯಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು.

ಸಾಮಾಜಿಕ ನ್ಯಾಯ ಮತ್ತು ಒಕ್ಕೂಟ ವ್ಯವಸ್ಥೆಗೆ ಈ ಸವಾಲಿನ ಸಮಯದಲ್ಲಿ ನಿಮ್ಮ ಧ್ವನಿ ಶ್ಲಾಘನೀಯ. ನಮ್ಮ ದೇಶದ ಸಂವಿಧಾನವನ್ನು ಎತ್ತಿಹಿಡಿಯುವಲ್ಲಿ ಮತ್ತು ನಮ್ಮ ಜನರ ಹಕ್ಕುಗಳನ್ನು ರಕ್ಷಿಸುವಲ್ಲಿ ಕರ್ನಾಟಕ ಮತ್ತು ತಮಿಳುನಾಡು ಒಗ್ಗಟ್ಟಿನಿಂದ ನಿಲ್ಲುತ್ತವೆ ಎಂದು ತಿಳಿಸಿದ್ದಾರೆ.

ನಿನ್ನೆ ಸ್ಟಾಲಿನ್ ಅವರು, ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾಷಾ ಹಕ್ಕುಗಳನ್ನು ರಕ್ಷಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯವನ್ನು ಮುನ್ನಡೆಸುವಲ್ಲಿ ನಿಮ್ಮ ಬಲವಾದ ಧ್ವನಿಯು ನಿಜವಾದ ಒಕ್ಕೂಟ ಮತ್ತು ಅಂತರ್ಗತ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಈ ಮೌಲ್ಯಗಳು ಇಂದಿನ ಭಾರತದಲ್ಲಿ ಅಪಾರ ಮಹತ್ವವನ್ನು ಹೊಂದಿವೆ; ಹಾಗೂ ತಮಿಳುನಾಡು ಮತ್ತು ಕರ್ನಾಟಕದ ಜನರು ಅವುಗಳನ್ನು ಎತ್ತಿಹಿಡಿಯುವಲ್ಲಿ ಒಟ್ಟಾಗಿ ನಿಲ್ಲುವರು. ನಿಮಗೆ ನಿರಂತರ ಶಕ್ತಿ, ಸಂತೋಷ ಮತ್ತು ದೀರ್ಘಾಯುಷ್ಯವನ್ನು ಹಾರೈಸುತ್ತೇನೆ ಎಂದು ಕನ್ನಡದಲ್ಲೇ ತಿಳಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read