ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ.20 ರಂದು ಹೊಸಪೇಟೆ ನಗರಕ್ಕೆ ಆಗಮಿಸಲಿದ್ದು, ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಡುವ ಅವರು, 9.50 ಕ್ಕೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ಗೆ ಆಗಮಿಸುವರು. ಬೆಳಿಗ್ಗೆ 11.15ಕ್ಕೆ ಜಿಂದಾಲ್ ಏರ್ಸ್ಟ್ರಿಪ್ ನಿಂದ ಹೆಲಿಕಾಪ್ಟರ್ ಮೂಲಕ ಹೊರಟು, 11:30ಕ್ಕೆ ಹೊಸಪೇಟೆ ನಗರದ ಭಟ್ಟರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹೆಲಿಪ್ಯಾಡ್ಗೆ ಬಂದಿಳಿಯುವರು. ನಂತರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತ ವತಿಯಿಂದ ಜರುಗಲಿರುವ ‘ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ’, ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ ಒಂದು ಲಕ್ಷ ಕುಟುಂಬಗಳಿಗೆ ನೆಮ್ಮದಿ ಕಂದಾಯ ಗ್ರಾಮ ಹಕ್ಕು ಪತ್ರ ಸಮರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಭಟ್ಟರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣ ಹೆಲಿಪ್ಯಾಡ್ನಲ್ಲಿ ಹೆಲಿಕ್ಯಾಪ್ಟರ್ ಮೂಲಕ 03:15 ಕ್ಕೆ ಜಿಂದಾಲ್ ಏರ್ಸ್ಟ್ರಿಪ್ ತೋರಣಗಲ್ಲು ತಲುಪಿ 03:20 ಕ್ಕೆ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.