HomeKarnatakaBIG NEWS: ಮನೆ ಬದಲಾಯಿಸಲು ಮುಂದಾದ ಸಿಎಂ ಸಿದ್ದರಾಮಯ್ಯ : ಕುಮಾರಕೃಪಾದಿಂದ ಕಾವೇರಿಗೆ ಶೀಘ್ರವೇ ಶಿಫ್ಟ್

BIG NEWS: ಮನೆ ಬದಲಾಯಿಸಲು ಮುಂದಾದ ಸಿಎಂ ಸಿದ್ದರಾಮಯ್ಯ : ಕುಮಾರಕೃಪಾದಿಂದ ಕಾವೇರಿಗೆ ಶೀಘ್ರವೇ ಶಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲಿಯೇ ಮನೆ ಬದಲಾಯಿಸಲಿದ್ದಾರೆ. ಆಷಾಢ ಮುಗಿಯುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಮನೆ ಶಿಫ್ಟ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಿಂದ ಸಿಎಂ ಸಿದ್ದರಾಮಯ್ಯ ಶೀಘ್ರವೇ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಈಗ ಕಾವೇರಿ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದು, ಈಗಗಾಲೇ ರಿನೋವೇಷನ್ ಕೆಲಸ ಕೂಡ ಬಹುತೇಕ ಪೂರ್ಣಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ಕಾವೇರಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ನವೀಕರಣಗೊಂಡ ಮನೆ ಪರಿಶೀಲನೆ ನಡೆಸಿದ್ದು, ಆಷಾಢ ಮುಗಿಯುತ್ತಿದ್ದಂತೆ ಕುಮಾರಕೃಪಾ ರಸ್ತೆಯಲ್ಲಿರುವ ನಿವಾಸದಿಂದ ಕಾವೇರಿ ನಿವಾಸಕ್ಕೆ ಮನೆ ಬದಲಾಯಿಸಲಿದ್ದಾರೆ.

ಇನ್ನು ಸಿಎಂ ಇದ್ದ ಕುಮಾರಕೃಪಾ ರಸ್ತೆಯ ನಿವಾಸ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹಂಚಿಕೆಯಾಗಿದ್ದು, ಸಿಎಂ ಕಾವೇರಿಗೆ ಶಿಫ್ಟ್ ಆಗುತ್ತಿದ್ದಂತೆ ಇತ್ತ ಡಿಸಿಎಂ ಕುಮಾರಕೃಪಾ ಮನೆಗೆ ಬದಲಾಗಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular