ಇಂದಿನಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಧಾರವಾಡ ಪ್ರವಾಸ : ವಿವಿಧ ಯೋಜನೆಗಳಿಗೆ ಚಾಲನೆ

ಧಾರವಾಡ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿಸೆಂಬರ್ 16 ರಂದು ಧಾರವಾಡ ಜಿಲ್ಲೆಗೆ ಆಗಮಿಸಲಿದ್ದಾರೆ.  ಮುಖ್ಯಮಂತ್ರಿಗಳು ಡಿ.16 ರಂದು ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಸ್ತೆ ಮೂಲಕ ಸಂಜೆ 5-20 ಕ್ಕೆ ಧಾರವಾಡಕ್ಕೆ ಆಗಮಿಸಿ, ಹುಬ್ಬಳ್ಳಿ-ಧಾರವಾಡ ಮುಖ್ಯರಸ್ತೆಯ ಓಝೋನ್ ಹೋಟೆಲ್ ಎದುರಿನ ಅಂಬರೈ ಗಾರ್ಡನ್‍ದಲ್ಲಿ ಚಂದ್ರಕಾಂತ ಗುರಪ್ಪ ಬೆಲ್ಲದ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಮುಖ್ಯಮಂತ್ರಿಗಳು ಸಂಜೆ 6 ಗಂಟೆಗೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ, ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟಾಪ್ ವಿತರಣೆ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ನಂತರ ರಾತ್ರಿ 7-15 ಕ್ಕೆ ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಿ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ರೈಲ್ವೆ ಕ್ರೀಡಾ ಮೈದಾನದಲ್ಲಿ ಕಾಟೇರ ಚಲನಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡುವರು.

 ಮುಖ್ಯಮಂತ್ರಿಗಳು ಡಿ.17 ರಂದು ಬೆಳಿಗ್ಗೆ 9-30 ಗಂಟೆಗೆ ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ನಾಗಶೆಟ್ಟಿಕೊಪ್ಪ, ಮಧುರ ಎಸ್ಟೇಟ್ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯರಾದ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡುವರು. ಬೆಳಿಗ್ಗೆ 10-30 ಕ್ಕೆ ಹೆಲಿಕಾಪ್ಟರ್ ಮೂಲಕ ಗದಗ ಜಿಲ್ಲೆಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read