ದಾವಣಗೆರೆ : ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪ್ರಸಿದ್ಧ ವಾಲ್ಮೀಕಿ ಜಾತ್ರೆ ನಡೆಯಲಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.
ಇಂದು ಮಧ್ಯಾಹ್ನ 1.25 ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ ಆವರಣದಲ್ಲಿರುವ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠ(ರಿ) ರಾಜನಹಳ್ಳಿ ವತಿಯಿಂದ ಆಯೋಜಿಸಿರುವ ಮಹರ್ಷಿ ವಾಲ್ಮೀಕಿ ಜನ ಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.
ರಾಜನಹಳ್ಳಿಗೆ ಆಗಮಿಸಲು ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿಯಾಗಿ ಹರಿಹರದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಇಲಾಖೆಯಿಂದ ಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗುತ್ತಿದ್ದು ಆಗಮಿಸುವ ಎಲ್ಲಾ ಭಕ್ತರಿಗೆ ಸಕಾಲದಲ್ಲಿ ಪ್ರಸಾದ ವ್ಯವಸ್ಥೆ ಮಾಡಲು ಮತ್ತು ಹೆಚ್ಚುವರಿಯಾಗಿ ತಟ್ಟೆಗಳನ್ನಿಟ್ಟುಕೊಂಡು ಊಟದಲ್ಲಿ ಯಾವುದೇ ತರಹದ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಮತ್ತು ಪ್ರಸಾದ ವಿತರಣೆಗಿಂತ ಮೊದಲು ಆರೋಗ್ಯ ಇಲಾಖೆಯಿಂದ ಸಂಪೂರ್ಣ ತಪಾಸಣೆ ಮಾಡಲು ಸೂಚನೆ ನೀಡಲಾಗಿದೆ.

