HomeLatest Newsಮೈಸೂರಿನಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿ

ಮೈಸೂರಿನಲ್ಲಿಂದು ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಇಂದು ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಗೌರವ ಸಮರ್ಪಿಸಲಿದ್ದಾರೆ, ಮೈಸೂರಿನ ಗಾಂಧಿ ಸ್ಟೇರ್ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಂದಿಧ್ವಜ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4:42ಕ್ಕೆ ವಿಜಯದಶಮಿ ಮೆರವಣಿಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿ ಮಂಟಪದಲ್ಲಿ ಪಂಜಿನ ಕವಾಯತುನಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಇಂದು ಕೂಡ ಸಿದ್ದರಾಮಯ್ಯ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ 11:25ಕ್ಕೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular