
ಮೊದಲು ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಸಿಎಂ ಆಲಿಸಲಿದ್ದಾರೆ. ಈ ಹಿಂದೆ ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಆದ್ರೆ ನಾಳೆ ಎಸ್ಸಿಪಿ-ಟಿಪಿಎಸ್ಪಿ ಸಭೆ ಹಿನ್ನೆಲೆ ಭೇಟಿ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು ಆಗಸ್ಟ್ 1ರಂದು ಮಳೆಹಾನಿ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದರು. ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

