HomeKarnatakaBIG NEWS : ರಾಜೀನಾಮೆ ವದಂತಿ ಬೆನ್ನಲ್ಲೇ ‘CM ಸಿದ್ದರಾಮಯ್ಯ’ ಟ್ವೀಟ್ : 3 ವರ್ಷದ...

BIG NEWS : ರಾಜೀನಾಮೆ ವದಂತಿ ಬೆನ್ನಲ್ಲೇ ‘CM ಸಿದ್ದರಾಮಯ್ಯ’ ಟ್ವೀಟ್ : 3 ವರ್ಷದ ‘ಸಾಧನೆ’ ಮೂಲಕ ಪರೋಕ್ಷ ಸಂದೇಶ ?

ಬೆಂಗಳೂರು :   ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕುರಿತಾದ ವದಂತಿಗಳ ಹಿನ್ನೆಲೆಯಲ್ಲಿ, ಅವರು ಇತ್ತೀಚೆಗೆ ಮಾಡಿರುವ ಟ್ವೀಟ್ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ (X) ಖಾತೆಯಲ್ಲಿ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಕುರಿತು ಪೋಸ್ಟ್ ಮಾಡಿದ್ದಾರೆ. “ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ, ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ” ಎಂದು ಅವರು ಬರೆದುಕೊಂಡಿದ್ದಾರೆ. ಇದರಲ್ಲಿ ಪ್ರಮುಖವಾಗಿ 5 ಗ್ಯಾರಂಟಿ ಯೋಜನೆಗಳ ಜಾರಿ ಮತ್ತು ಅನ್ನಭಾಗ್ಯ ಯೋಜನೆಯ ಯಶಸ್ಸನ್ನು ಉಲ್ಲೇಖಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ,

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular