ಬೆಂಗಳೂರು : ರಾಜ್ಯದಲ್ಲಿ ‘ಮನರೇಗಾ’ (MGNREGA) ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಅಪರೂಪದ ದೃಶ್ಯವೊಂದು ಎಲ್ಲರ ಗಮನ ಸೆಳೆಯಿತು. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆಗೆ ಸಿದ್ಧವಾಗುತ್ತಿದ್ದಾಗ, ಡಿ.ಕೆ. ಶಿವಕುಮಾರ್ ಅವರು ಸರಿಯಾಗಿ ಪೇಟ ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಆಗ ಪಕ್ಕದಲ್ಲೇ ಇದ್ದ ಸಿಎಂ ಸಿದ್ದರಾಮಯ್ಯ ಅವರು ತಾವೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ತಲೆಗೆ ಪೇಟ ಕಟ್ಟಿ ಸರಿಪಡಿಸಿದರು.
ಹೌದು. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮತ್ತು ರೈತರ ಸಂಕೇತವಾಗಿ ಕಾಂಗ್ರೆಸ್ ನಾಯಕರು ತಲೆಗೆ ಟವೆಲ್ (ರುಮಾಲು) ಸುತ್ತಿದ್ದ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆಗೆ ಸಿದ್ಧವಾಗುತ್ತಿದ್ದಾಗ, ಡಿ.ಕೆ. ಶಿವಕುಮಾರ್ ಅವರು ಸರಿಯಾಗಿ ಟವೆಲ್ ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಆಗ ಪಕ್ಕದಲ್ಲೇ ಇದ್ದ ಸಿಎಂ ಸಿದ್ದರಾಮಯ್ಯ ಅವರು ತಾವೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ತಲೆಗೆ ಪೇಟ ಕಟ್ಟಿ ಸರಿಪಡಿಸಿದರು.
ಈ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಇಬ್ಬರು ನಾಯಕರ ನಡುವಿನ ಒಗ್ಗಟ್ಟು ಮತ್ತು ಸ್ನೇಹವನ್ನು ಇದು ಬಿಂಬಿಸುತ್ತದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಶ್ಲಾಘಿಸಿದರು. ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದಲ್ಲಿ ರಾಜ್ಯ ನಾಯಕರು ಒಗ್ಗಟ್ಟಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸಲು ಈ ಕ್ಷಣವು ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯ ಕೂಡ ಈ ಕುರಿತು ಟ್ವೀಟ್ ಮಾಡಿದ್ದಾರೆ.
ಹೋರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ ‘ವಿಬಿ ಗ್ರಾಮ್ ಜಿ’ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇದು ಮಹಾತ್ಮ ಗಾಂಧಿಯವರ ಚಿಂತನೆ ಮತ್ತು ಅವರ ಗ್ರಾಮ ಸ್ವರಾಜ್ಯದ ಆಶಯದ ಮೇಲಿನ ಗದಾಪ್ರಹಾರ. ಕೇಂದ್ರ ಸರ್ಕಾರವು ಈ ಜನವಿರೋಧಿ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಮರು ಜಾರಿ ಮಾಡುವ ವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

