BREAKING : ಸಹಕಾರಿ ಧುರೀಣ ಬಿ.ಎಸ್.ವಿಶ್ವನಾಥ್ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ.!

ಬೆಂಗಳೂರು : ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪ್ರತಿಮೆಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆವರಣದಲ್ಲಿ ಸಹಕಾರಿ ಧುರೀಣ ಬಿ.ಎಸ್.ವಿಶ್ವನಾಥ್ರವರ ಪುತ್ತಳಿಯನ್ನು ಅನಾವರಣಗೊಳಿಸಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆವರಣದಲ್ಲಿ ಸಹಕಾರಿ ಧುರೀಣ ಬಿ.ಎಸ್.ವಿಶ್ವನಾಥ್ರವರ ಪುತ್ತಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರಾಗಿ ಬೆಳೆದದ್ದು ನಮಗೆಲ್ಲ ಹೆಮ್ಮೆಯ ವಿಷಯ. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪ್ರತಿಮೆಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಿದ್ದೇನೆ.

ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್, ಷಡಕ್ಷರಿ, ಹೆಚ್.ಎಂ.ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳು ಬಹಳಷ್ಟು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲಾ ಗಣ್ಯರಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read