ಶಿರಡಿ ಸಾಯಿಬಾಬಾ ಮಂದಿರಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ, ಪೂಜೆ ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಪ್ರವಾಸದ ವೇಳೆ ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮಳೆ ಬೆಳೆ ಉತ್ತಮವಾಗಲಿ. ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.

ಮಹಾರಾಷ್ಟ್ರದ ಸಂಗಮನೇರ್ ನಲ್ಲಿ ಭಾನುವಾರ ಆಯೋಜಿಸಿದ್ದ ಸಹಕಾರ ಚಳವಳಿಯ ಹಿರಿಯ ಧುರೀಣ ಭಾವು ಸಾಹೇಬ್ ಥೋರಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ. ಅಣ್ಣಾ ಸಾಹೇಬ್ ಶಿಂಧೆ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಭಾಗವಹಿಸಿದ್ದರು.

ಪ್ರವಾಸದ ವೇಳೆ ಮುಖ್ಯಮಂತ್ರಿಗಳು ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಸೇರಿದಂತೆ ಹಲವು ನಾಯಕರು ಇದ್ದರು.

https://twitter.com/siddaramaiah/status/1744020977439404202

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read