HomeLatest NewsBREAKING : ನಾಡಿದ್ದು 'CM ಸಿದ್ದರಾಮಯ್ಯ' ದೆಹಲಿಗೆ ಭೇಟಿ : 5 ವಿಧೇಯಕ ಅಂಗೀಕಾರಕ್ಕೆ ರಾಷ್ಟ್ರಪತಿಗಳ...

BREAKING : ನಾಡಿದ್ದು ‘CM ಸಿದ್ದರಾಮಯ್ಯ’ ದೆಹಲಿಗೆ ಭೇಟಿ : 5 ವಿಧೇಯಕ ಅಂಗೀಕಾರಕ್ಕೆ ರಾಷ್ಟ್ರಪತಿಗಳ ಜೊತೆ ಚರ್ಚೆ

ಬೆಂಗಳೂರು : ಪ್ರಾಥಮಿಕ ಶಾಲೆಗಳಲ್ಲಿ ಮಾತೃಭಾಷೆಯಲ್ಲೇ ಕಡ್ಡಾಯ ಶಿಕ್ಷಣ ನೀಡುವ ವಿಧೇಯಕ ಸೇರಿ ಅಂಕಿತ ಬಾಕಿ ಇರುವ ಐದು ಪ್ರಮುಖ ಪ್ರಸೂದೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಲು ನಾಡಿದ್ದು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನೂ ಭೇಟಿ ಮಾಡಲಿದ್ದಾರೆ.

ರಾಜ್ಯದಲ್ಲಿ ಶಾಲೆಗಳಲ್ಲಿ 1- 5ನೇ ತರಗತಿವರೆಗೆ ಮಾತೃ ಭಾಷೆ ಮಾಧ್ಯಮದಲ್ಲೇ ಶಿಕ್ಷಣ ಕಡ್ಡಾಯವಾಗಿ ಕಲಿಸುವ ಕುರಿತ ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಕರ್ನಾಟಕ ತಿದ್ದುಪಡಿ) -2015’: ಅಲ್ಪಸಂಖ್ಯಾತರಿಗೆ ಗುತ್ತಿಗೆ ಮೀಸಲಾತಿ ಕೆಟಿಪಿಪಿ ತಿದ್ದುಪಡಿ ವಿಧೇಯಕ ಸೇರಿ ರಾಷ್ಟ್ರ ಪತಿಗಳ ಅಂಕಿತ ಬಾಕಿರುವ 5 ಪ್ರಮುಖ ವಿಧೇಯಕಗಳ ಚರ್ಚೆಗೆ ಸಿದ್ದರಾಮಯ್ಯ ರಾಷ್ಟ್ರಪತಿ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ.

ಅಲ್ಪಸಂಖ್ಯಾತರಿಗೆ ಗುತ್ತಿಗೆ ಹಾಗೂ ಖರೀದಿಯಲ್ಲಿ ಮೀಸಲಾತಿಯ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ತಿದ್ದುಪಡಿ ಕಾಯಿದೆ (ಕೆಟಿಪಿಪಿ)- 2025, ಕರ್ನಾಟಕ ನೋಂದಣಿ ತಿದ್ದುಪಡಿ ಕಾಯಿದೆ-2025, ನೋಟರಿ ಕರ್ನಾಟಕ ತಿದ್ದುಪಡಿ ಕಾಯದೆ-2025, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ
ತಿದ್ದುಪಡಿ ಮಸೂದೆ ಹಾಗೂ ‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಕರ್ನಾಟಕ ತಿದ್ದುಪಡಿ) -2015, ವಿಧೇಯಕಗಳ ವಿವರಣೆ ನೀಡಿ ಅಂಗೀಕಾರಕ್ಕೆ ಮನವೊಲಿಸುವ ಯತ್ನ ಮಾಡಲಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular