BREAKING : ಶಕ್ತಿ ದೇವತೆ ‘ಹಾಸನಾಂಬೆ ದೇವಿ’ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಸನಾಂಬ ದೇವಿ ದರ್ಶನಕ್ಕೆ ಜನಸಾಗರವೇ ಹರಿದ ಬರುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.

ಇಂದು ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹಾಸನಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಾಸನಾಂಬೆ ದರ್ಶನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಸಿಎಂ ಆದ ಮೊದಲ ಬಾರಿಗೆ ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಸಂಪುಟ ಸಹದ್ಯೋಗಿಗಳ ಜೊತೆ ಬಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ವರ್ಷಕ್ಕೊಮ್ಮೆ ದರುಶನ ನೀಡುವ ಹಾಸನಾಂಬೆ ದರ್ಶನಕ್ಕೆ 5 ನೇ ದಿನವೂ ಭಕ್ತಸಾಗರವೇ ಹರಿದು ಬಂದಿದೆ. ಶಕ್ತಿ ಯೋಜನೆ ಹಿನ್ನೆಲೆ ದೇವಾಲಯಕ್ಕೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಬರುತ್ತಿದೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದು, ನವೆಂಬರ್ 15 ರವರೆಗೆ ದಿನದ 24 ಗಂಟೆಯೂ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read