ರಾಜ್ಯದ ಜನತೆಗೆ ‘ಸಂವಿಧಾನ ದಿನ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬೆಂಗಳೂರು : ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ. ನಾಡಬಾಂಧವರಿಗೆಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ನಮ್ಮ ರಾಜಕೀಯದ ಮತ್ತು ಸರ್ಕಾರದ ಸಿದ್ಧಾಂತವೂ ಹೌದು. ಈ ಆಶಯಗಳೊಂದಿಗೆ ಸಾಗುತ್ತಿರುವ ನಮ್ಮ ಸರ್ಕಾರ ಎದುರಾಗುವ ಎಲ್ಲ ಪ್ರತಿರೋಧಗಳನ್ನು ಬಾಬಾಸಾಹೇಬ್ ಅಂಬೇಡ್ಕರರು ನಮ್ಮ ಕೈಯಲ್ಲಿಟ್ಟು ಹೋಗಿರುವ ಸಂವಿಧಾನದ ಅಸ್ತ್ರದ ಮೂಲಕವೇ ಎದುರಿಸಿ ಮುನ್ನಡೆಯಲಿದೆ. ಇದೇ ಸಂದರ್ಭದಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ ಸಂವಿಧಾನದ ಪ್ರಸ್ತಾವಣೆಯಲ್ಲಿರುವ ಸಮಾಜವಾದಿ ಮತ್ತು ಜಾತ್ಯತೀತ ಆಶಯಗಳನ್ನು ಎತ್ತಿಹಿಡಿಯುತ್ತಿರುವುದು ಅತೀವ ಸಂತೋಷ ಮತ್ತು ಭವಿಷ್ಯದಲ್ಲಿ ಭರವಸೆಯನ್ನು ಮೂಡಿಸಿದೆ. ಭಾರತೀಯ ಸಂವಿಧಾನವು ಅಂಗೀಕಾರಗೊಂಡ ಈ ದಿನದಂದು ಸಂವಿಧಾನಶಿಲ್ಪಿ ಅಂಬೇಡ್ಕರರನ್ನು ಗೌರವದಿಂದ ನೆನೆಯುತ್ತೇನೆ. ನಾಡಬಾಂಧವರಿಗೆಲ್ಲರಿಗೂ ಸಂವಿಧಾನ ದಿನಾಚರಣೆಯ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read