ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ |New Year 2024

ಬೆಂಗಳೂರು : ‘ಬದಲಾವಣೆಯ ವರ್ಷದಿಂದ ಭರವಸೆಯ ವರ್ಷಕ್ಕೆ ಕಾಲಿಡುತ್ತಿರುವ ನನ್ನ ಪ್ರೀತಿಯ ನಾಡ ಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು’ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಹಳೆಯ ವರ್ಷದಲ್ಲಿ ಮುನಿಸುಕೊಂಡಿದ್ದ ಪ್ರಕೃತಿ ಹೊಸ ವರ್ಷದಲ್ಲಿ ನಮಗೆಲ್ಲ ಒಲಿದು ಬರಲಿ,
ಸಕಲ ಜೀವಾತ್ಮಗಳಿಗೆ ಲೇಸನ್ನು ಉಂಟು ಮಾಡಲಿ,2024ರ ಇಡೀ ವರ್ಷ ತಮ್ಮ ಬದುಕು ಸುಖ, ಶಾಂತಿ, ಸಮೃದ್ಧಿಯಿಂದ ಕೂಡಿರಲಿ, ನಿಮ್ಮ ಎಲ್ಲ ಕನಸುಗಳು ನನಸಾಗಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ಶುಭಾಶಯ ತಿಳಿಸಿದ್ದಾರೆ.

ನಾವೆಲ್ಲರೂ ಕೂಡಿ ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಉತ್ಸಾಹ, ಹೊಸ ಭರವಸೆಗಳೊಂದಿಗೆ ಬರಮಾಡಿಕೊಳ್ಳೋಣ. ಮತ್ತೊಮ್ಮೆ ತಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಶುಭಾಶಯ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read