HomeLatest Newsಬಿ.ಎಸ್ ಯಡಿಯೂರಪ್ಪಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬಿ.ಎಸ್ ಯಡಿಯೂರಪ್ಪಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ.!

ಬೆಂಗಳೂರು :   ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಫೆಬ್ರವರಿ 27, 2026) ತಮ್ಮ 84ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಹಿರಿಯ ನಾಯಕನಿಗೆ ಆತ್ಮೀಯವಾಗಿ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು, ಹಿರಿಯ ರಾಜಕೀಯ ನಾಯಕರು ಆದ ಬಿ.ಎಸ್.ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ‌ ಶುಭಾಶಯಗಳು. ತಮಗೆ ಇನ್ನಷ್ಟು ಕಾಲ ಆಯಸ್ಸು, ಆರೋಗ್ಯ ಲಭಿಸಲಿ‌ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಯಡಿಯೂರಪ್ಪ ಅವರ ನಿವಾಸಕ್ಕೆ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಆಗಮಿಸಿ ಹೂಗುಚ್ಛ ನೀಡುವ ಮೂಲಕ ತಮ್ಮ ನಾಯಕನಿಗೆ ಶುಭ ಕೋರುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ವಿವಿಧ ಕೇಂದ್ರ ಸಚಿವರುಗಳು ಹಾಗೂ ವಿವಿಧ ಪಕ್ಷಗಳ ಗಣ್ಯರು ಬಿಎಸ್‌ವೈ ಅವರ ರಾಜಕೀಯ ಸುದೀರ್ಘ ಪಯಣವನ್ನು ಸ್ಮರಿಸುತ್ತಾ ಶುಭ ಹಾರೈಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular