BREAKING : ಕರ್ನಾಟಕದ ಜನತೆಗೆ ‘ನಾಡಹಬ್ಬ ದಸರಾ’ ಶುಭಾಶಯ ಕೋರಿದ CM ಸಿದ್ದರಾಮಯ್ಯ |WATCH VIDEO

ಬೆಂಗಳೂರು : ನಾಡಬಂಧುಗಳಿಗೆ ಸಿಎಂ ಸಿದ್ದರಾಮಯ್ಯ ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ. ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ. ನಾಡಬಂಧುಗಳಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರುತ್ತಾ, ದಸರಾದ ಪೂರ್ವತಯಾರಿಗಳ ಕುರಿತ ಈ ಸುಂದರ ವೀಡಿಯೋವನ್ನು ನಿಮ್ಮೆದುರು ಇಡುತ್ತಿದ್ದೇವೆ. ನೋಡಿ, ಅನಿಸಿಕೆ ಹಂಚಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ವಿಡಿಯೋ ಮೂಲಕ ಪೋಸ್ಟ್ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read