HomeKarnatakaಈ ಸಲ ಕಪ್ ನಮ್ದೇ: ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ

ಈ ಸಲ ಕಪ್ ನಮ್ದೇ: ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ

ಬೆಂಗಳೂರು: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

“ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ.

ಭಾರತ ಗೆದ್ದಿದೆ.. ಈ ಸಲ ಕಪ್ ನಮ್ದೆ..” ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular