ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ‘ಕಲ್ಟ್’ ಸಿನಿಮಾವನ್ನು ವೀಕ್ಷಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಓರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಿಸಿದ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
ಸಂಪುಟ ಸಹೋದ್ಯೋಗಿಗಳು, ಆತ್ಮೀಯರು ಆದ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ‘ಕಲ್ಟ್’ ಸಿನಿಮಾವನ್ನು ವೀಕ್ಷಿಸಿದೆ. ಚಿತ್ರದ ಕತೆ, ಸಂಭಾಷಣೆ, ಸಂಗೀತ, ಕಲಾವಿದರ ಅಭಿನಯ ಈ ಎಲ್ಲವೂ ಇಡೀ ಚಿತ್ರವನ್ನು ಅತ್ಯಂತ ಸೊಗಸಾಗಿ ಕಟ್ಟಿಕೊಟ್ಟಿದೆ. ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಒಂದು ಚಿತ್ರ ಇದು. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿ ಪ್ರದರ್ಶನ ಕಂಡು ಶತದಿನ ಪೂರೈಸಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

