HomeLatest Newsರಾಜ್ಯದ ಜನತೆಗೆ ‘ಮಕರ ಸಂಕ್ರಾಂತಿ’ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ರಾಜ್ಯದ ಜನತೆಗೆ ‘ಮಕರ ಸಂಕ್ರಾಂತಿ’ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು :  ಇಂದು ರಾಜ್ಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಈ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿಯು ಸಮಾಜದ ದ್ವೇಷ – ಅಸೂಯೆ – ಅಪನಂಬಿಕೆಗಳನ್ನು ಕಳೆದು ಶಾಂತಿ,‌ ಸೌಹಾರ್ದತೆ, ಪ್ರೀತಿಯ ಹೊಸ ಹಾದಿಯಲ್ಲಿ ಮುನ್ನಡೆಸಲಿ. ಅನ್ನದಾತನ ವರ್ಷದ ಶ್ರಮವೆಲ್ಲ ಬೆಳೆಯ ರೂಪದಲ್ಲಿ ಕೈಸೇರುವ ಕಾಲವಿದು. ಈ ಸಂಭ್ರಮದ ಹಬ್ಬವು ರೈತಾಪಿ ಜನರ ಬಾಳಲ್ಲಿ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ. ಎಳ್ಳು – ಬೆಲ್ಲದ ಜೊತೆಗೆ ಪ್ರೀತಿ, ವಿಶ್ವಾಸ ಮಿಳಿತಗೊಳ್ಳಲಿ, ನಾಡು ಸರ್ವಜನಾಂಗದ ಶಾಂತಿಯ ಬೀಡಾಗಲಿ. ನಾಡಬಂಧುಗಳಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಡಿಕೆಶಿ ಶುಭಾಶಯ

ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಸೂರ್ಯನು ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಪಾದಾರ್ಪಣೆ ಮಾಡುವ ಈ ಪುಣ್ಯಕಾಲವು ಸೌಭಾಗ್ಯದ ಸಂಕೇತ. ಈ ಸುಗ್ಗಿಯ ಸಂಭ್ರಮವು ನಮ್ಮ ಅನ್ನದಾತರ ಬಾಳಿನಲ್ಲಿ ಹೊಸ ಭರವಸೆ ಹಾಗೂ ಸುಖ-ಸಮೃದ್ಧಿಯನ್ನು ತರಲಿ ಎಂದು ಆಶಿಸುತ್ತೇನೆ ಎಂದು ಡಿಸಿಎಂ ಡಿಕೆಶಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.  ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ‌ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/2011655914907173186

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular