BIG NEWS : ಮೆಕ್ಕೆಜೋಳ , ಹೆಸರುಕಾಳು ಬೆಳೆಗಾರರ ಸಮಸ್ಯೆಗಳ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ CM ಸಿದ್ದರಾಮಯ್ಯ.!

ಬೆಂಗಳೂರು : ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನಾ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಿಎಂ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕಕ್ಕೆ ಎಥೆನಾಲ್ ಹಂಚಿಕೆ ಪ್ರಮಾಣವನ್ನು ಹೆಚ್ಚಿಸಿ ಕರ್ನಾಟಕದಲ್ಲಿ ಮೆಕ್ಕೆ ಜೋಳದ ಉತ್ಪಾದನೆ ಗರಿಷ್ಠ ಪ್ರಮಾಣದಲ್ಲಿದ್ದು, ಸುಮಾರು 272 ಕೋಟಿ ಲೀ. ಡಿಸ್ಟಿಲರಿ ಸಾಮರ್ಥ್ಯ ಹೊಂದಿದೆ. ಹಾಗಾಗಿ ಎಥೆನಾಲ್ ಉತ್ಪಾದನೆಗೆ ಅಧಿಕ ಪ್ರಮಾಣದ ಮೆಕ್ಕೆ ಜೋಳದ ಉತ್ಪಾದನೆಯು ತಕ್ಕುದಾಗಿದೆ. 2025-26ರ ಎಥೆನಾಲ್ ಟೆಂಡರ್ ಹಂಚಿಕೆಯ ಪ್ರಕಾರ ತೈಲ ಉತ್ಪಾದಕಾ ಕಂಪನಿಗಳು 1,050 ಕೋಟಿ ಲೀಟರ್ ಎಥೆನಾಲ್ ಉತ್ಪಾದಿಸಲು ಟೆಂಡರ್ ನೀಡಿವೆ. ಈ ಪೈಕಿ 758.6 ಕೋಟಿ ಲೀ. (72.45%) ಧಾನ್ಯಗಳ ಆಧಾರಿತ ಎಥೆನಾಲ್ ಉತ್ಪಾದನೆಗೆ ಹಂಚಿಕೆಯಾಗಿದ್ದು, ಇದರಲ್ಲಿ ಮೆಕ್ಕೆಜೋಳ ಒಂದರಿಂದಲೇ 478 ಕೋಟಿ ಲೀ. ಎಥೆನಾಲ್ ಉತ್ಪಾದಿಸಬೇಕಿದೆ.

ಕರ್ನಾಟಕದಲ್ಲಿರುವ 49 ಘಟಕಗಳಿಂದ 272 ಕೋಟಿ ಲೀ. ಎಥೆನಾಲ್ ಉತ್ಪಾದಿಸುವ ಸಾಮರ್ಥ್ಯವಿದ್ದರೂ ನಮ್ಮ ರಾಜ್ಯಕ್ಕೆ ಅತ್ಯಂತ ಕಡಿಮೆ ಹಂಚಿಕೆ ಮಾಡಲಾಗಿದೆ. ರಾಜ್ಯದ ಮೆಕ್ಕೆಜೋಳದ ಉತ್ಪಾದನಾ ಸಾಮರ್ಥ್ಯ ಹೆಚ್ಚಿದ್ದು, ನಮ್ಮ ಎಥೆನಾಲ್ ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ ಅತ್ಯಂತ ಕನಿಷ್ಠ ಪ್ರಮಾಣವಾಗಿದೆ. ಧಾನ್ಯ ಆಧಾರಿತ ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಪ್ರಮುಖವಾಗಿರುವುದರಿಂದ ಹಂಚಿಕೆಯ ವ್ಯತ್ಯಾಸವು ಅತ್ಯಂತ ಕಳವಳಕಾರಿಯಾಗಿದೆ. ಪ್ರಸಕ್ತ ವರ್ಷದ ವಲಯವಾರು ಹಂಚಿಕೆ ವ್ಯವಸ್ಥೆಯು ಕರ್ನಾಟಕದಂತಹ ಗರಿಷ್ಠ ಉತ್ಪದನಾ ಸಾಮರ್ಥ್ಯದ ರಾಜ್ಯಕ್ಕೆ ಅನನುಕೂಲವಾಗಿದೆ. ನಮ್ಮ ಉತ್ಪಾದನಾ ಸಾಮರ್ಥ್ಯಕ್ಕೆ ತಕ್ಕಂತೆ ಹೆಚ್ಚಿನ ಪ್ರಮಾಣದ ಧಾನ್ಯ ಆಧಾರಿತ ಎಥೆನಾಲ್ ಉತ್ಪಾದನೆಯ ಹಂಚಿಕೆಯನ್ನು ಪಡೆಯಲು ಕರ್ನಾಟಕವು ಯೋಗ್ಯವಾಗಿದೆ. ಇದರಿಂದ ಬೇಡಿಕೆಯ ಎಂಎಸ್ಪಿ ಬೆಲೆಯನ್ನು ಸರಿದೂಗಿಸಲು ಮತ್ತು ತೆರೆದ ಮಾರುಕಟ್ಟೆಗಳಲ್ಲಿ ರೈತರ ಹಿತಾಸಕ್ತಿಯನ್ನು ಕಾಪಾಡಲು ಸಾಧ್ಯವಾಗುತ್ತದೆ. 4. ಮೆಕ್ಕೆಜೋಳ ಆಮದು ಕಡಿಮೆ ಮಾಡಿ ಕಳೆದ ವರ್ಷ ಮಯನ್ಮಾರ್, ಉಕ್ರೇನ್ ಮತ್ತಿತರ ರಾಷ್ಟ್ರಗಳಿಂದ ಹೆಚ್ಚಾಗಿ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದ್ದರಿಂದ ದೇಶದ ರೈತರಿಗೆ ದೊಡ್ಡ ಹೊಡೆತ ಬಿದ್ದಿದೆ.

ಇಂತಹ ಆಮದು ಪ್ರಕ್ರಿಯೆಯಿಂದ ದೇಶಿಯವಾಗಿ ಬೆಲೆ ಕುಸಿಯಲು ಕಾರಣವಾಗಿದೆ ಮತ್ತು ರೈತರ ನ್ಯಾಯಯುತ ಆದಾಯಕ್ಕೆ ಬರೆ ಎಳೆದಂತಾಗಿದೆ. ಹಾಗಾಗಿ ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ನಾನು ಕೇಂದ್ರ ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತಿದ್ದೇನೆ. ಇದರಿಂದ ವಿಶ್ವದಲ್ಲೇ ಅತ್ಯುತ್ತಮ ಮೆಕ್ಕೆಜೋಳ ಉತ್ಪಾದಿಸುವ ಭಾರತದ ರೈತರಿಗೆ ನ್ಯಾಯ ಒದಗಿಸಿದಂತಾಗುತ್ತದೆ. 5. ಹೆಸರುಕಾಳು ಖರೀದಿಗೆ ಗುಣಮಟ್ಟದ ನಿಯಮಗಳಲ್ಲಿ ಸಡಿಲಿಕೆ ಅನಿರೀಕ್ಷಿತ ಮಳೆಯಿಂದಾಗಿ ಕರ್ನಾಟಕದ ಹೆಸರುಕಾಳು ಬೆಳೆಯು ಕೆಲವು ಭಾಗದಲ್ಲಿ 6-10% ವರೆಗೆ ಬಣ್ಣ ಮಾಸಿದೆ. ಕೇಂದ್ರ ಸರ್ಕಾರದ FAQ ಗಳು MSP ಅಡಿ ಗರಿಷ್ಠ 4% ಬಣ್ಣ ಮಾಸಿದ್ದರೂ ಖರೀದಿಗೆ ಅವಕಾಶ ನೀಡಿದೆ, ನಮ್ಮ ಬೆಳೆ ಸ್ವಲ್ಪ ಹೆಚ್ಚು ಬಣ್ಣ ಮಾಸಿದ್ದರೂ ಆಹಾರ ಉದ್ದೇಶದ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಿಗೆ ನಿರ್ದೇಶನ ನೀಡಿ 10% ವರೆಗೆ ಬಣ್ಣ ಮಾಸಿರುವ ಹೆಸರುಕಾಳನ್ನು MSP ದರದಲ್ಲಿ ಖರೀದಿಸಲು ಅವಕಾಶ ನೀಡಬೇಕು. ಇದರಿಂದ ರೈತರು ತಮ್ಮ ನಿಯಂತ್ರಣದಲ್ಲಿ ಇಲ್ಲದ ಹವಾಮಾನ ವೈಪರಿತ್ಯಗಳು ಉಂಟುಮಾಡುವ ನಷ್ಟವನ್ನು ತಪ್ಪಿಸಿಕೊಳ್ಳಬಹುದಾಗಿದೆ. ಕರ್ನಾಟಕದ ಪ್ರತಿಯೊಂದು ರೈತ ಕುಟುಂಬವು ಎಂಎಸ್ಪಿಯನ್ನು ಗೌರವಯುತ ಹಾಗೂ ನ್ಯಾಯಯುತ ಆದಾಯ ಎಂದು ಪರಿಗಣಿಸಿದೆ. ಇಂದು ಬೆಲೆಯು ಎಂಎಸ್ಪಿಗಿಂತ ಕೆಳಗೆ ಬಿದ್ದಾಗ ಮತ್ತು ಮಾರುಕಟ್ಟೆಗಳು ಅವರ ವಿರುದ್ಧ ನಿಂತಾಗ ತಕ್ಷಣ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು. ದೇಶದ ಆಹಾರ ಭದ್ರತೆಗೆ, ಎಥೆನಾಲ್ ಉತ್ಪಾದನೆಯ ಸಾಮರ್ಥ್ಯ ವಿಸ್ತರಿಸಲು ಮತ್ತು ಆರ್ಥಿಕ ಬೆಳವಣಿಗೆಗೆ ಕರ್ನಾಟಕದ ರೈತರು ಗರಿಷ್ಠ ಪ್ರಮಾಣದ ಕೊಡುಗೆಯನ್ನು ನೀಡುತ್ತಿದ್ದಾರೆ. ನ್ಯಾಯಯುತ ಬೆಲೆ ಮತ್ತು ಸಮಾನ ಎಥೆನಾಲ್ ಹಂಚಿಕೆಯು ರೈತರ ಹಕ್ಕು ಮಾತ್ರವಲ್ಲ, ಅದು ರಾಷ್ಟ್ರೀಯ ಜವಾಬ್ದಾರಿಯು ಹೌದು. ಸಂಕಷ್ಟದಲ್ಲಿರುವ ಕರ್ನಾಟಕದ ರೈತರ ನೆರವಿಗೆ ತಕ್ಷಣ ಧಾವಿಸಬೇಕು ಮತ್ತು ನಮ್ಮ ರಾಷ್ಟ್ರದ ಬೆನ್ನೆಲುಬು ಆಗಿರುವ ಕೃಷಿ ಕ್ಷೇತ್ರವನ್ನು ಶಕ್ತಿಯುತವಾಗಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read