HomeKarnatakaಎಲ್‌ಪಿಜಿ ಅಭಾವ ನೀಗಿಸಲು ಕೇಂದ್ರಕ್ಕೆ ಪತ್ರ: ಸಿಎಂ ಸಿದ್ಧರಾಮಯ್ಯ

ಎಲ್‌ಪಿಜಿ ಅಭಾವ ನೀಗಿಸಲು ಕೇಂದ್ರಕ್ಕೆ ಪತ್ರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ ಎಂದರು.

ಆಹಾರಕ್ಕಾಗಿ ಹೋಟೆಲ್ ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿಯವರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ಪರಿಸ್ಥಿತಿ ನಿರ್ವಹಿಸುವ ಭರವಸೆ ನೀಡಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕದಲ್ಲಿ ಮಾತ್ರ ಎಲ್‌ಪಿಜಿ ಪೂರೈಕೆಯಲ್ಲಿ‌ ಸಮಸ್ಯೆ ಎದುರಾಗಿರುವುದಲ್ಲ, ದೇಶದ ಎಲ್ಲ ಕಡೆಯೂ ಇದೇ ಪರಿಸ್ಥಿತಿ ಇದೆ. ರಾಜ್ಯ ಬಿಜೆಪಿಯವರು ಅರ್ಥವಿಲ್ಲದಂತೆ ಮಾತನಾಡುವ ಬದಲು, ಎಲ್‌ಪಿಜಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲು ಕೇಂದ್ರವನ್ನು ಒತ್ತಾಯಿಸಲಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular