HomeKarnatakaಇಂದಿನಿಂದ ನಿರುದ್ಯೋಗಿ ಪದವೀಧರರ ಖಾತೆಗೆ 3 ಸಾವಿರ ರೂ. ಜಮಾ: 5ನೇ ಗ್ಯಾರಂಟಿ 'ಯುವ ನಿಧಿ'ಗೆ...

ಇಂದಿನಿಂದ ನಿರುದ್ಯೋಗಿ ಪದವೀಧರರ ಖಾತೆಗೆ 3 ಸಾವಿರ ರೂ. ಜಮಾ: 5ನೇ ಗ್ಯಾರಂಟಿ ‘ಯುವ ನಿಧಿ’ಗೆ ಇಂದು ಚಾಲನೆ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿಗೆ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಅದ್ದೂರಿ ಚಾಲನೆ ನೀಡಲಾಗುವುದು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಯುವನಿಧಿ ಜಾರಿಯೊಂದಿಗೆ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಜಾರಿಯಾಗಲಿದೆ. ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. 61,000ಕ್ಕೂ ಅಧಿಕ ನೋಂದಣಿಯಾಗಿದ್ದು, ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ., ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ಮಾಸಿಕ 1500 ರೂಪಾಯಿಗಳನ್ನು ಅವರ ಖಾತೆಗೆ ಸಂದಾಯ ಮಾಡಲಾಗುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular