ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್ ನೀಡಿದ್ದು, ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
ಹೌದು, ಲೋಕೋಪಯೋಗಿ ಇಲಾಖೆ, ರಸ್ತೆ, ಸೇತುವೆ, ನಗರ ಕಾಮಗಾರಿಗಳಿಗೆ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ.
ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಜುಲೈ 30 ಹಾಗೂ 31 ರಂದು ಸಿಎಂ ಸಿದ್ದರಾಮಯ್ಯ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಹಾಗೆಯೇ ಸಿಎಂ ಬೇಡಿಕೆ ಪತ್ರದ ಜೊತೆ ಕಾಮಗಾರಿ ವಿವರ ನೀಡಲು ಶಾಸಕರಿಗೆ ಸೂಚನೆ ನೀಡಿದ್ದಾರೆ. ತಮ್ಮ ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಹಲವು ಬಾರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರು. ಇದೀಗ ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿ ಸಿಎಂ ಬಂಪರ್ ಗಿಫ್ಟ್ ನೀಡಿದ್ದಾರೆ.
ಸಚಿವ ಸಂಪುಟ ಸಭೆಯ ಹೈಲೆಟ್ಸ್
ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು#Cabinetdecisions pic.twitter.com/X5m0Ux6OcR
— Siddaramaiah (@siddaramaiah) July 17, 2025
You Might Also Like
TAGGED:ಕಾಂಗ್ರೆಸ್ ಶಾಸಕ